ಸುಳ್ಯ: ಬಳ ಸಮೀಪದ ಕೇನ್ಯ ಕಟ್ಕಲ್ ಬಳಿಯ ಹೊಳೆಯಲ್ಲಿ ಮುಳುಗಿ ನೀರು ಪಾಲಾಗಿದ್ದ ಇಬ್ಬರು ಸಹೋದರಿಯರ ಮೃತದೇಹ ಪತ್ತೆಯಾಗಿದೆ.
ನಿನ್ನೆ ಸಂಜೆ ಈ ದುರ್ಘಟನೆ ಸಂಭವಿಸಿದೆ.
ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಅವರ ಪುತ್ರಿಯರಾದ ಹಂಸಿತಾ (15) ಮತ್ತು ಅವಂತಿಕಾ (11) ಎಂಬ ಸಹೋದರಿಯರು ನೀರು ಪಾಲಾದವರು.
ಸಹೋದರಿಯರು ನೀರುಪಾಲಾದ ಸುದ್ದಿ ತಿಳಿದು ಆಗಮಿಸಿದ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿದಾಗ ರಾತ್ರಿ ವೇಳೆಗೆ ಇಬ್ಬರ ಮೃತದೇಹವೂ ಪತ್ತೆಯಾಗಿದೆ.




























