ಕೇಂದ್ರ ಲೋಕಸೇವಾ ಆಯೋಗ (UPSC) ಎಪ್ರಿಲ್ ನಲ್ಲಿ ನಡೆಸಿದ ರಾಷ್ಟ್ರ ಮಟ್ಟದ ಎನ್.ಡಿ.ಎ ಅರ್ಹತಾ ಪರೀಕ್ಷೆಯಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಈ ಸ್ಪರ್ಧಾತ್ಮಕ ಪರೀಕ್ಷೆಗೆ ಪ್ರತಿ ವರ್ಷ ಸುಮಾರು 2 ಲಕ್ಷಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಾರೆ. ಈ ಪರಿಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ಭಾಗವಹಿಸುವ ಅರ್ಹತೆ ಪಡೆಯುತ್ತಾರೆ.

ವಿದ್ಯಾರ್ಥಿಗಳಾದ ವಿಪುಲ್. ಎಸ್ ಮತ್ತು ತಿಯಾನಂದ್. ಎಮ್ ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಮುಂದಿನ ಹಂತಕ್ಕೆ ಅರ್ಹತೆ ಪಡೆದಿದ್ದಾರೆ. ಸಾಧನೆಗೈದ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.




























