ಪುತ್ತೂರು : ರಾಜ್ಯಾದ್ಯಂತ ವಿಧಾನ ಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ರವರು ಮಠಂತಬೆಟ್ಟು ಶ್ರೀ ಮಹಿಷಮರ್ದಿನೀ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಮತ ಚಲಾಯಿಸಲು ತೆರಳುವ ಮೊದಲು ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪ್ರಾರ್ಥನೆ, ಪೂಜೆ ಸಲ್ಲಿಸಿದರು.



























