ಬಂಟ್ವಾಳ : ರಾಜ್ಯಾದ್ಯಂತ ವಿಧಾನ ಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ್ ರೈ ರವರು ಮತ ಚಲಾಯಿಸಿದರು.

ಕಳ್ಳಿಗೆ ಗ್ರಾಮದ ತೊಡಂಬಿಲ ಮತದಾನ ಕೇಂದ್ರದಲ್ಲಿ ಅವರು ಕುಟುಂಬ ಸಮೇತರಾಗಿ ಆಗಮಿಸಿ ಮತ ಚಲಾಯಿಸಿದರು.

ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯ ವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.


























