ಚಿಕ್ಕಮಗಳೂರು: ಕರ್ನಾಟಕ ಕುರುಕ್ಷೇತ್ರದಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಬೆಳಗ್ಗೆಯಿಂದಲೇ ವೋಟಿಂಗ್ ಬೂತ್ಗೆ ತೆರಳಿದ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಮತದಾನ ಸಂಭ್ರಮದ ಮಧ್ಯೆ ನವ ದಂಪತಿಗಳು ಮಾದರಿಯಾಗಿದ್ದಾರೆ. ರಾಜ್ಯದ ಕೆಲವೆಡೆ ನವ ವಧು ವರರು ಮತಗಟ್ಟೆಗೆ ಬಂದು ಮತದಾನ ಮಾಡುತ್ತಾ ಎಲ್ಲರ ಗಮನವನ್ನು ಸೆಳೆದಿದ್ದಾರೆ.

ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿಯಲ್ಲಿ ವಧು ಕೂಡ ಮತ ಚಲಾಯಿಸುವ ಮೂಲಕ ನೆಟ್ಟಿಗರ ಗಮನ ಸೆಳೆದಿದ್ದಾರೆ. ಮುಹೂರ್ತಕ್ಕೂ ಮುನ್ನ ಮತ ಚಲಾವಣೆ ಮಾಡಿ ಬಳಿಕ ಮದುವೆ ಮಂಟಪಕ್ಕೆ ವಧು ತೆರಳಿದರು.

ಇನ್ನು ಕ್ರೈಸ್ತ ಧರ್ಮದ ವಧು ಮತಗಟ್ಟೆಗೆ ಬಂದು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ.


























