ಮಂಗಳೂರು : ಸುರತ್ಕಲ್ ಎನ್.ಐ.ಟಿ.ಕೆ ಯಲ್ಲಿ ಮೇ.13 ರಂದು ಮತ ಎಣಿಕೆ ನಡೆಯಲಿದ್ದು, ಈ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಮೇ.13 ರಂದು ಬೆಳಿಗ್ಗೆ 5 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯ ವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ರವರು ಆದೇಶಿಸಿದ್ದಾರೆ.



























