ಉಪ್ಪಿನಂಗಡಿ : ನಿನ್ನೆ ಸಂಜೆ ವೇಳೆ ಸುರಿದ ಭಾರೀ ಗಾಳಿ ಮಳೆಗೆ ಮನೆಯೊಂದರ ಮೇಲೆ ಮರ ಬಿದ್ದು ಅಪಾರ ಪ್ರಮಾಣದ ನಷ್ಟ ಉಂಟಾದ ಘಟನೆ ಉಪ್ಪಿನಂಗಡಿಯ ಅಡೆಕ್ಕಲ್ ಬೇರಿಕೆ ಎಂಬಲ್ಲಿ ನಡೆದಿದೆ.

ಉಪ್ಪಿನಂಗಡಿಯ ಅಡೆಕ್ಕಲ್ ಬೇರಿಕೆ ಶಾಂತಪ್ಪ ಪೂಜಾರಿ ಎಂಬವರ ಮನೆಗೆ ಮರ ಬಿದ್ದು ಅಪಾರ ಪ್ರಮಾಣದ ನಷ್ಟ ಉಂಟಾಗಿದ್ದು, ಘಟನಾ ಸ್ಥಳಕ್ಕೆ ಪುತ್ತೂರು ವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರು ಭೇಟಿ ನೀಡಿದರು.

ಈ ವೇಳೆ ಮನೆಯವರೊಂದಿಗೆ ದುರಸ್ಥಿ ಕ್ರಮದ ಬಗ್ಗೆ ಮಾತುಕತೆ ನಡೆಸಿದರು.

























