ಮಂಗಳೂರು : ಮೂಡುಶೆಡ್ಡೆಯಲ್ಲಿ ಬುಧವಾರ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಬಂಧಿಸಲಾಗಿದೆ.
ಬಂಧಿತರು ಪುನಿತ್ ಶಿವನಗರ, ನಿಶಾಂತ್ ಕುಮಾರ್, ರಾಕೇಶ್ ಮತ್ತು ದಿನೇಶ್ ಕುಮಾರ್ ಶಾಲೆಪದವು ಎನ್ನುವವರಾಗಿದ್ದಾರೆ.
4 ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಇತರ ಭಾಗಿದಾರರನ್ನು ಗುರುತಿಸುತ್ತಿದ್ದೇವೆ. ಸಂಬಂಧಪಟ್ಟ ಎಲ್ಲ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಗಲಾಟೆಯಲ್ಲಿ ಕೆಲವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಓರ್ವ ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿದ್ದು, ಒಂದು ಪೊಲೀಸ್ ವಾಹನಕ್ಕೆ ಹಾನಿಯಾಗಿದೆ.
ಈ ಘಟನೆಯಲ್ಲಿ, ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಒಟ್ಟು 5 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದ್ದು ಕಾನೂನು ಸುವ್ಯವಸ್ಥೆ ಕಾಪಾಡಲು 5 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.
























