ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿದೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಬಸರಾಜ ಬೊಮ್ಮಾಯಿ ರಾಜೀನಾಮೆಗೆ ಮುಂದಾಗಿದ್ದಾರೆ.
ಇಂದು ಸಂಜೆ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಆಗಮಿಸಿದ ನಂತರ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಲಿದ್ದಾರೆ.


























