ವಿಧಾನ ಸಭಾ ಚುನಾವಣೆಯ ಫಲಿತಾಂಶದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತನಾಡಿ, ಬಿಜೆಪಿ ಸೋಲಿನ ಹೊಣೆ ಹೊರುವುದಾಗಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಕಟೀಲ್, ‘ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿರುವುದಕ್ಕೆ ಕರ್ನಾಟಕ ಜನತೆಗೆ ಧನ್ಯವಾದಗಳನ್ನು ಸಲ್ಲಿಸ್ತೇನೆ. ಗೆದ್ದ ಬಿಜೆಪಿ ಅಭ್ಯರ್ಥಿಗಳಿಗೆ ಹಾಗೂ ಕಾಂಗ್ರೆಸ್‌ಗೂ ಅಭಿನಂದನೆ ಸಲ್ಲಿಸ್ತೇನೆ. ಜನತಾ ಆಶೀರ್ವಾದ ಸ್ವಾಗತಿಸ್ತೇನೆ. ರಾಜ್ಯ ಒಳ್ಳೆಯ ಕಾರ್ಯಗಳಿಗೆ ಸ್ವಾಗತ ಕೊಟ್ಟಿದ್ದೇವೆ. ವಿರೋಧಕ್ಕೆ ವಿರೋಧ ಮಾಡಿದ್ದೇವೆ’ ಎಂದರು.
‘ನಮ್ಮ ಕಾರ್ಯಕರ್ತರು ಹಗಲು, ರಾತ್ರಿ ಕೆಲಸ ಮಾಡಿದ್ದಾರೆ. ನಮ್ಮ ಸರ್ಕಾರ ಉತ್ತಮ ಕೆಲಸ ಮಾಡಿದೆ. ಯಡಿಯೂರಪ್ಪ, ಬೊಮ್ಮಾಯಿ ಅವರು ಕೆಲಸ ಮಾಡಿದ್ದಾರೆ. ಇಂದು ಬಂದಿರೋ ಫಲಿತಾಂಶವನ್ನು ನಾನು ಸ್ವಾಗತಿಸ್ತೇನೆ. ಸೋತಿರೋ ಕಡೆ ಯಾಕೆ ಸೋತಿದ್ದೇವೆ ಅಂತ ಪರಾಮರ್ಶೆ ಮಾಡ್ತೀವಿ. ಮುಂದಿನ ಲೋಕಸಭಾ ಚುನಾವಣೆಗೆ ಒಟ್ಟಾಗಿ ಕೆಲಸ ಮಾಡ್ತೀವಿ’ ಎಂದರು.
‘ಮುಂದಿನ ದಿನಗಳಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಿ, ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ’ ಎಂದರು.


























