ಪುತ್ತೂರು : ಸರ್ಕಾರಿ ಬಸ್ ನಿಲ್ದಾಣದ ಬಳಿ ಬಿಜೆಪಿ ನಾಯಕರ ಫೋಟೋಗಳನ್ನು ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆದು., ಚಪ್ಪಲಿ ಹಾರ ಹಾಕಿರುವ ಬ್ಯಾನರ್ ಅನ್ನು ನಗರಸಭೆಯಿಂದ ತೆರವುಗೊಳಿಸಲಾಗಿದೆ.

‘ಭಾರತೀಯ ಜನತಾ ಪಾರ್ಟಿಯ ಪುತ್ತೂರು ಮೂಲದ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭಾವಚಿತ್ರ ವಿರುವ ಬ್ಯಾನರ್ ನಲ್ಲಿ ‘ಭಾವಪೂರ್ಣ ಶ್ರದ್ಧಾಂಜಲಿ ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ., ನೊಂದ ಹಿಂದೂ ಕಾರ್ಯಕರ್ತರು’ ಎಂದು ಬರೆದು ಅಳವಡಿಸಲಾಗಿತ್ತು.
ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿಷಯ ತಿಳಿದ ತಕ್ಷಣ ನಗರಸಭೆ ಬ್ಯಾನರ್ ಅನ್ನು ತೆರವುಗೊಳಿಸಿದೆ.























