ವಿಟ್ಲ : ಮಹಿಳೆಯ ಜೊತೆ ಅಸಭ್ಯ ರೀತಿಯಲ್ಲಿ ವರ್ತಿಸಿದ ಘಟನೆಗೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಕನ್ಯಾನದ ಅಬೂಬಕ್ಕರ್ (46) ಬಂಧಿತ ಆರೋಪಿ.

ಈತ ಮೋಟಾರ್ ಸೈಕಲ್ ನಲ್ಲಿ ಬಂದು ದಾರಿ ಕೇಳುವ ನೆಪದಲ್ಲಿ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದ.
ಆರೋಪಿ ಪತ್ತೆಯ ಕಾರ್ಯದಲ್ಲಿ ವಿಟ್ಲ ಠಾಣೆಯ ಪೊಲೀಸ್ ನಿರೀಕ್ಷಕರಾದ ನಾಗರಾಜ್ ಹೆಚ್ ಈ ರವರ ಮಾರ್ಗದರ್ಶನದಂತೆ ವಿಟ್ಲ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಕಾರ್ತಿಕ್ ಕಾತರಕಿ ಹಾಗೂ ಸಿಬ್ಬಂದಿಗಳಾದ ಹೆಚ್‌ಸಿ ರಕ್ಷಿತ್ ಮತ್ತು ಪಿಸಿ ಹೇಮರಾಜ ರವರು ಪಾಲ್ಗೊಂಡಿದ್ದರು.
ಘಟನೆಯ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದ ಅರುಣ್ ಪುತ್ತಿಲ ರವರು ಆರೋಪಿಯನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿದ್ದು, ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿದ್ದರು.



























