ಮಂಗಳೂರು : ಜಿಲ್ಲಾ ಗೃಹರಕ್ಷಕ ದಳದಿಂದ ಗೃಹರಕ್ಷಕರ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ವಾಹನ ಚಾಲನಾ ಪರವಾನಗಿ ಪಡೆದಿರುವ ಪುರುಷ ಅಭ್ಯರ್ಥಿಗಳಿಗೆ ಆದ್ಯತೆ ಇದೆ.
ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ ಹಾಗೂ 19 ವರ್ಷದಿಂದ 50 ವರ್ಷದೊಳಗಿನ ಅಭ್ಯರ್ಥಿಗಳು ಸಮಾದೇಷ್ಟರು, ಜಿಲ್ಲಾ ಗೃಹರಕ್ಷಕದಳ, ಮೇರಿಹಿಲ್, ಮಂಗಳೂರು ಇಲ್ಲಿ ಅರ್ಜಿ ಪಡೆದು ಜೂನ್ 15ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 0824-22205627ಗೆ ಕರೆ ಮಾಡುವಂತೆ ಸಮಾದೇಷ್ಟರಾದ ಡಾ.ಮುರುಲೀಮೋಹನ್ ಚೂಂತಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

























