ಪುತ್ತೂರು : ಅರುಣ್ ಕುಮಾರ್ ಪುತ್ತಿಲ ರವರ ಫ್ಲೆಕ್ಸ್ ಗೆ ಕಲ್ಲು ತೂರಾಟ ನಡೆಸಿದ ಘಟನೆ ಕಾವು ಮೇಲಿನ ಪೇಟೆಯಲ್ಲಿ ಮೇ.16 ರಂದು ನಡೆದಿದೆ.

ಪೇಟೆಯಲ್ಲಿ ಜನ ಸೇರಿರುವಾಗಲೇ ಕಲ್ಲು ತೂರಾಟ ನಡೆಸಿದ್ದು, ಘಟನೆಯಿಂದ ಪುತ್ತಿಲ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಹಲವಾರು ಮಂದಿ ಸ್ಥಳದಲ್ಲಿ ಜಮಾಯಿಸಿದ್ದರು.
ವಿಷಯ ತಿಳಿದ ತಕ್ಷಣ ಅರುಣ್ ಪುತ್ತಿಲ ರವರು ಸ್ಥಳಕ್ಕೆ ತೆರಳಿ ಆಕ್ರೋಶಿತರನ್ನು ಸಮಾಧಾನಪಡಿಸಿ, ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆಯುತ್ತಾರೆ ಎಂಬ ಬಗ್ಗೆ ಆಶ್ವಾಸನೆ ನೀಡಿದರು.

ಈ ಬಗ್ಗೆ ಸಂಪ್ಯ ಗ್ರಾಮಾಂತರ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

























