ಪುತ್ತೂರು : ಸರ್ಕಾರಿ ಬಸ್ ನಿಲ್ದಾಣದ ಮುಂಭಾಗ ಬಿಜೆಪಿ ನಾಯಕರ ಫೋಟೋವಿದ್ದ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಒಂಭತ್ತು ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು ಅವರಿಗೆ ಥಳಿಸಿ ದೌರ್ಜನ್ಯ ಎಸಗಿದ್ದಾರೆಂಬ ಆರೋಪ ಕೇಳಿ ಬರುತ್ತಿದ್ದು, ಈ ಬಗ್ಗೆ ಸತ್ಯಾಂಶ ತಿಳಿಯಲು ವಿಚಾರಣೆ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್.ಪಿ ತಿಳಿಸಿದ್ದಾರೆ.
ದಕ್ಷಿಣ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿರುವ ವಿಕ್ರಮ್ ಅಮಟೆ ರವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷರ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ದಸ್ತಗಿರಿ ಮಾಡಿದ ಆರೋಪಿತರಿಗೆ ಪೊಲೀಸರು ಹಲ್ಲೆ ಮಾಡಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಪ್ರಸಾರವಾಗುತ್ತಿರುವ ಬಗ್ಗೆ ತಿಳಿದು ಬಂದಿದೆ.
ಈ ಬಗ್ಗೆ ಸತ್ಯಾoಶ ತಿಳಿದುಕೊಳ್ಳಲು ವಿಚಾರಣೆ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


























