ಪುತ್ತೂರು : ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ಪುತ್ತೂರು ನಗರ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಿದ ಆರೋಪಿತರಿಗೆ ಪೊಲೀಸರು ಹಲ್ಲೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ಪುತ್ತೂರು ಡಿಎಸ್ಪಿ, ಪುತ್ತೂರು ಗ್ರಾಮಾಂತರ ಠಾಣಾ ಪಿ.ಎಸ್.ಐ , ಪುತ್ತೂರು ಗ್ರಾಮಾಂತರ ಠಾಣಾ ಪಿಸಿ ಹರ್ಷಿತ್ ರವರ ವಿರುದ್ಧ ಪುತ್ತೂರು ನಗರ ಠಾಣೆ Cr no.39/23
u/s 323,324,506 r/w 34 ಐಪಿಸಿ ರಂತೆ ಪ್ರಕರಣ ದಾಖಲಾಗಿದೆ.
ಪ್ರಕರಣದ ತನಿಖೆಯನ್ನು ಬಂಟ್ವಾಳ ಡಿಎಸ್ಪಿ ರವರಿಗೆ ವಹಿಸಲಾಗಿದೆ. ಹೆಚ್ಚುವರಿ ಪೊಲೀಸ್ ಅಧೀಕ್ಷಕರ ವಿಚಾರಣೆ ವರದಿ ಆಧಾರದ ಮೇಲೆ ಪುತ್ತೂರು ಗ್ರಾಮಾಂತರ ಠಾಣಾ ಪಿ.ಎಸ್.ಐ , ಪುತ್ತೂರು ಗ್ರಾಮಾಂತರ ಠಾಣಾ ಪಿಸಿ ಹರ್ಷಿತ್ ರನ್ನು ಸೇವೆಯಿಂದ ಅಮಾನತು ಗೊಳಿಸಲಾಗಿದೆ ಹಾಗೂ ಪುತ್ತೂರು ಡಿಎಸ್ಪಿ ರವರ ವಿರುದ್ಧ ಸೂಕ್ತ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲು ವರದಿಯನ್ನು ಮೇಲಾಧಿಕಾರಿಗಳಿಗೆ ಸಲ್ಲಿಸಲಾಗಿದೆ.

























