ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಪುತ್ತೂರಿಗೆ ಬಂದು ಮಾತನಾಡುವ ಅಗತ್ಯವಿಲ್ಲ, ನನ್ನ ಕ್ಷೇತ್ರದಲ್ಲಿ ಅನ್ಯಾಯ ಆದವರಿಗೆ ನ್ಯಾಯ ಕೊಡಿಸುವ ಶಕ್ತಿ ನನಗಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.

ಮಾಡಿದ ತಪ್ಪನ್ನು ಇನ್ನೊಬ್ಬರ ತಲೆಗೆ ಕಟ್ಟುವ ಕೆಲಸ ಬಿಟ್ಟುಬಿಡಿ ಎಂದು ಬಿಜೆಪಿ ಯವರಿಗೆ ಸಲಹೆ ನೀಡಿರುವ ರೈ ಇನ್ನೆರಡು ದಿನದಲ್ಲಿ ಅಮಾನವೀಯ ಹಲ್ಲೆ ನಡೆಸಲು ಪೋಲೀಸರಿಗೆ ಒತ್ತಡ ಹಾಕಿದವರ ಹೆಸರು ಬಹಿರಂಗ ಪಡಿಸುವೆ ಎಂದು ಹೇಳಿದ್ದಾರೆ.
ದೌರ್ಜನ್ಯಕ್ಕೆ ಪುತ್ತೂರು ತಾಲೂಕಿನಲ್ಲಿ ಅವಕಾಶ ನೀಡುವುದಿಲ್ಲ ಎಂದು ತಮ್ಮ ಸ್ಪಷ್ಟ ನಿಲುವನ್ನು ತೋರಿದ್ದಾರೆ.ಈ ಬಗ್ಗೆ ತಮ್ಮ ಅಧಿಕೃತ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

























