ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರನ್ನು ಭಾರತೀಯ ಜನತಾ ಪಾರ್ಟಿಯ ಕಾಸರಗೋಡು ಜಿಲ್ಲಾಧ್ಯಕ್ಷ ವೇ. ಕುಂಟಾರು ರವೀಶ ತಂತ್ರಿಗಳು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಕಾರ್ಯಕರ್ತರ ಜೊತೆ ಮಾತನಾಡಿ ಅವರಿಗೆ ಧೈರ್ಯ ತುಂಬಿದರು.
ಈ ವೇಳೆ ಹಿಂದೂ ಜಾಗರಣ ವೇದಿಕೆ ಪ್ರಮುಖರು ಉಪಸ್ಥಿತರಿದ್ದರು.