ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾ ಮೇ.22 ರಂದು ಬೆಳ್ತಂಗಡಿಯ ಕಿನ್ಯಮ್ಮಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ವತಿಯಿಂದ ನಡೆದ ಅಭಿನಂದನಾ ಕಾರ್ಯಕ್ರಮದ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 24 ಹಿಂದೂಗಳ ಕೊಲೆ ಮಾಡಿದವರೆಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರ ವಿರುದ್ಧ ಪ್ರಕರಣ ದಾಖಲಾಗಿದೆ.
ಪೂಂಜಾ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ನೀಡಿದರು.
ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಮಿತ ಕೆ ಪೂಜಾರಿ ನೀಡಿದ ದೂರಿನ ಮೇರೆಗೆ ಶಾಸಕ ಹರೀಶ್ ಪೂಂಜಾ ಹಾಗೂ ಕಾರ್ಯಕ್ರಮದ ಆಯೋಜಕ ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್ ವಿರುದ್ಧ ಐಪಿಸಿ ಸೆಕ್ಷನ್ 153, 153ಎ, 505 ರಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


























