ಬೆಂಗಳೂರು : ಕಳೆದ ಎರಡು ದಿನಗಳ ಕಾಲ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆ ನಡೆದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಭೆ ಯಶಸ್ವಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸೇರಲಿರುವ 24 ಮಂದಿ ಸಚಿವರ ಪಟ್ಟಿ ಅಂತಿಮಗೊಂಡಿದೆ. ಈ 24 ಮಂದಿ ಇಂದು (ಮೇ.27) ಬೆಳಗ್ಗೆ 11.45ಕ್ಕೆ ರಾಜಭವನದ ಗಾಜಿನಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಮುಖ್ಯಮ೦ತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಒಳಗೊಂಡ ಹಾಲಿ ಅಸ್ತಿತ್ವವಿರುವ 10 ಮಂದಿಯ ಸಚಿವ ಸಂಪುಟಕ್ಕೆ ಶನಿವಾರ 24 ಮಂದಿ ಸೇರ್ಪಡೆಯಾದರೆ ಪರಿಪೂರ್ಣ ಸಂಪುಟ ರಚನೆಯಾದಂತೆ ಆಗುತ್ತದೆ. ಸಾಮಾನ್ಯವಾಗಿ ಒಂದು ಅಥವಾ ಎರಡು ಸಚಿವ ಸ್ಥಾನಗಳನ್ನು ಖಾಲಿ ಉಳಿಸಿಕೊಳ್ಳುವ ಸಂಪ್ರದಾಯಕ್ಕೆ ಸಚಿವ ಸ್ಥಾನದ ಆಕಾಂಕ್ಷಿಗಳ ತೀವ್ರ ಒತ್ತಡದ ಕಾರಣಕ್ಕೆ ತಿಲಾಂಜಲಿ ನೀಡಲಾಗಿದೆ.
ಭಾನುವಾರ ನೂತನ ಪಾರ್ಲಿಮೆಂಟ್ ಕಟ್ಟಡ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಶನಿವಾರ ನೂತನ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಒಪ್ಪಿಗೆ ಸೂಚಿಸಿದ್ದಾರೆ.
ನೂತನ ಸಚಿವರ ಪಟ್ಟಿ
- ಹೆಚ್.ಕೆ.ಪಾಟೀಲ್
- ಕೃಷ್ಣಭೈರೇಗೌಡ
- ಚಲುವರಾಯಸ್ವಾಮಿ
- ಪಿರಿಯಾಪಟ್ಟಣ ವೆಂಕಟೇಶ್
- ಡಾ.ಹೆಚ್.ಸಿ.ಮಹದೇವಪ್ಪ
- ಈಶ್ವರ ಖಂಡ್ರೆ
- ಕೆ.ಎನ್.ರಾಜಣ್ಣ
- ದಿನೇಶ್ ಗುಂಡೂರಾವ್
- ಶರಣಬಸಪ್ಪ ದರ್ಶನಾಪುರ
- ಶಿವಾನಂದ ಪಾಟೀಲ್
- ಆರ್.ಬಿ.ತಿಮ್ಮಾಪುರ
- ಎಸ್.ಎಸ್.ಮಲ್ಲಿಕಾರ್ಜುನ
- ಶಿವರಾಜ ತಂಗಡಗಿ
- ಡಾ.ಶರಣ ಪ್ರಕಾಶ್ ಪಾಟೀಲ್
- ಮಂಕಾಳು ವೈದ್ಯ
- ಲಕ್ಷ್ಮೀ ಹೆಬ್ಬಾಳ್ಕರ್
- ರಹೀಂ ಖಾನ್
- ಡಿ.ಸುಧಾಕರ್
- ಸಂತೋಷ್ ಲಾಡ್
- ಬೋಸರಾಜು
- ಬಿ.ಎಸ್.ಸುರೇಶ್
- ಮಧು ಬಂಗಾರಪ್ಪ
- ಎಂ.ಸಿ.ಸುಧಾಕರ್
- ಬಿ.ನಾಗೇಂದ್ರ
ರಾಜಭವನ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್
ರಾಜಭವನ ಸುತ್ತಮುತ್ತ ಭದ್ರತೆಗಾಗಿ 2700 ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. 17 ಡಿಸಿಪಿ, 37 ಎಸಿಪಿ, 114 ಇನ್ಸ್ಪೆಕ್ಟರ್ , 208 ಪಿಎಸ್ಐ, ಸೇರಿ 2700 ಪೊಲೀಸರನ್ನು ನಿಯೋಜಿಸಲಾಗಿದೆ. ಮಫ್ತಿಯಲ್ಲೂ 200ಕ್ಕೂ ಅಧಿಕ ಪೊಲೀಸರು ಕಾರ್ಯ ನಿರ್ವಹಿಸಲಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಡಿಸ್ವಾಟ್, ವಾಟರ್ಜೆಟ್ ನಿಯೋಜನೆ ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.