ಪುತ್ತೂರು : ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ರವರ ಪತ್ನಿ ನೂತನ ಕುಮಾರಿ ರವರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ ಎಂಬ ವಿಚಾರ ಈಗಾಗಲೇ ಸುದ್ದಿಯಾಗುತ್ತಿದ್ದು, ಈ ಬಗ್ಗೆ ಅರುಣ್ ಕುಮಾರ್ ಪುತ್ತಿಲ ರವರು ಪ್ರತಿಕ್ರಿಯಿಸಿದ್ದು, ಸರಕಾರ ಈ ರೀತಿ ನಿರ್ಧಾರ ಕೈಗೊಳ್ಳುವುದು ಸಮಂಜಸವಲ್ಲವೆಂದು ಅವರು ಹೇಳಿದರು.
ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ರವರನ್ನು ಕೆಲಸದಿಂದ ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ ಎಂಬ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು, ಒಂದು ಹೆಣ್ಣು ಮಗಳನ್ನು ಹಠಾತ್ ಆಗಿ ಕೆಲಸದಿಂದ ವಜಾಗೊಳಿಸುವುದು ಸರಿಯಾದ ಕ್ರಮವಲ್ಲ.
ಈ ವಿಷಯದಲ್ಲಿ ಕೀಳು ಮಟ್ಟದ ರಾಜಕಾರಣ ಮಾಡಬಾರದು.., ಮಾನವೀಯತೆ ದೃಷ್ಟಿಯಿಂದ ತಕ್ಷಣವೇ ನೂತನ ರನ್ನು ಮರು ನೇಮಕಾತಿ ಮಾಡಬೇಕು ಎಂದು ಅವರು ಆಗ್ರಹಿಸಿದರು.