ಪುತ್ತೂರು : ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ರವರ ಪತ್ನಿ ನೂತನ ಕುಮಾರಿ ರವರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ ಎಂಬ ವಿಚಾರ ಈಗಾಗಲೇ ಸುದ್ದಿಯಾಗುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಪ್ರತಿಕ್ರಿಯಿಸಿದ್ದಾರೆ.
ಹೊಸ ಸರ್ಕಾರ ಬಂದ ನಂತರ ಇಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲದೆ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ.
ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರನ್ನು ಮರು ನೇಮಕ ಮಾಡಲಾಗುವುದು ಎಂದು ಸಿಎಂ ಟ್ವೀಟ್ ಹಾಗೂ ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.