ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಹಿಂದೂ ಜಾಗರಣ ವೇದಿಕೆ ಪುರುಷರಕಟ್ಟೆ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸುವ ಮೂಲಕ ಅವರನ್ನು ಆಸ್ಪತ್ರೆಯಿಂದ ಕರೆದೊಯ್ಯಿದರು.

ಪೊಲೀಸರಿಂದ ದೌರ್ಜನ್ಯಕ್ಕೊಳಗಾಗಿ ಕಳೆದ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ಹಿನ್ನೆಲೆ ಹಿಂದೂ ಜಾಗರಣ ವೇದಿಕೆ ಪುರುಷರಕಟ್ಟೆ ಕಾರ್ಯಕರ್ತರು ಪುರುಷರಕಟ್ಟೆ ಪೇಟೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಪಟಾಕಿ ಸಿಡಿಸುವ ಮೂಲಕ ತಮ್ಮ ಹರ್ಷವನ್ನು ವ್ಯಕ್ತಪಡಿಸಿದರು.
ಪೊಲೀಸರಿಂದ ದೌರ್ಜನ್ಯಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಕಾರ್ಯಕರ್ತರನ್ನು ಹಲವಾರು ಪ್ರಮುಖರು ಭೇಟಿಯಾಗಿ ಧೈರ್ಯ ತುಂಬಿದ್ದು, ಈ ರೀತಿ ದೌರ್ಜನ್ಯವೆಸಗಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದರು.