ಪುತ್ತೂರು : ಅಕ್ಷಯ ಕಾಲೇಜಿನಲ್ಲಿ ಯಕ್ಷಗಾನ ಕಲಾ ಸಂಘ “ಯಕ್ಷಸಿಂಚನ“ ಉದ್ಘಾಟನೆಗೊಂಡಿತು.
ಉದ್ಘಾಟಕರಾದ ರವಿಚಂದ್ರ ಕನ್ನಡಿಕಟ್ಟೆ ಖ್ಯಾತ ಭಾಗವತರು ಹನುಮಗಿರಿ ಯಕ್ಷಗಾನ ಮೇಳ, ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ ಎಂದು ತಿಳಿಸಿದರು.

ಗೆಜ್ಜೆಗಿರಿ ಮೇಳದ ಪ್ರಧಾನ ಭಾಗವತರಾದ ಗಿರೀಶ್ ರೈ ಕಕ್ಕೆಪದವು ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮಕ್ಕೆ ಶುಭಕೋರಿದರು.
ಖ್ಯಾತ ಭಾಗವತರಾದ ರವಿಚಂದ್ರ ಕನ್ನಡಿಕಟ್ಟೆ ಮತ್ತು ಗಿರೀಶ್ ರೈ ಕಕ್ಕೆಪದವು ಅವರು ತಮ್ಮ ಸುಮಧುರ ಕಂಠದಿಂದ ಭಾಗವತಿಕೆಯನ್ನು ಹಾಡುವುದರ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರಾದ ಜಯಂತ ನಡುಬೈಲು ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂಪತ್ ಕೆ ಪಕ್ಕಳ ಹಾಗೂ ಆಡಳಿತಾಧಿಕಾರಿ ಅರ್ಪಿತ್ ಟಿ.ಎ ಉಪಸ್ಥಿತರಿದ್ದರು.

ಯಕ್ಷಗಾನ ಕಲಾ ಸಂಘದ ಸಂಚಾಲಕರಾದ ಪ್ರಭಾವತಿ ಕೆ ಸ್ವಾಗತಿಸಿ, ಕಾರ್ಯದರ್ಶಿ ಕೀರ್ತನ್ ಮತ್ತು ನರೇಂದ್ರ ರವರು ಯಕ್ಷಗಾನ ನಾಟ್ಯ ಪ್ರಾತ್ಯಕ್ಷತೆ ನೀಡಿದರು. ಜೊತೆ ಕಾರ್ಯದರ್ಶಿ ಭವ್ಯಶ್ರೀ ಧನ್ಯವಾದ ಅರ್ಪಿಸಿದರು. ನವಮಿ ಪ್ರಾರ್ಥಿಸಿ, ರೋಹಿತ್ ಕುಮಾರ್ ರವರು ಕಾರ್ಯಕ್ರಮ ನಿರೂಪಿಸಿದರು.





























