ಬಂಟ್ವಾಳ : ದ. ಕ. ಜಿ. ಪಂ. ಹಿ. ಪ್ರಾ ಶಾಲೆ ಕಡೇಶಿವಾಲಯದಲ್ಲಿ ಶಾಲಾ ಪ್ರಾರಂಭೋತ್ಸವ ಎಸ್. ಡಿ. ಎಂ. ಸಿ ಅಧ್ಯಕ್ಷರಾದ ಹರಿಶ್ಚಂದ್ರ ರವರ ಅಧ್ಯಕ್ಷತೆಯಲ್ಲಿ ಜರುಗಿತು.

ಮುಖ್ಯಅತಿಥಿಗಳಾಗಿ ಆಗಮಿಸಿದ ಕಡೇಶಿವಾಲಯ ಗ್ರಾಮ ಪಂಚಾಯತ್ ನ ಸದಸ್ಯರಾದ ಸುರೇಶ್ ಕನ್ನೊಟು ಹೊಸದಾಗಿ ಸೇರಿದ ಶಾಲಾ ಮಕ್ಕಳನ್ನು ಹೂಗುಚ್ಛ ನೀಡುವುದರೊಂದಿಗೆ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಸರಕಾರದಿಂದ ನೀಡಲ್ಪಟ್ಟ ಉಚಿತ ಪಠ್ಯ ಪುಸ್ತಕ ಹಾಗೂ ಸಮವಸ್ತ್ರವನ್ನು ವಿತರಿಸಲಾಯಿತು. ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಮಧ್ಯಾಹ್ನ ಮಕ್ಕಳಿಗೆ ಸಿಹಿ ಊಟ ನೀಡಲಾಯಿತು.

ಶಾಲಾ ಮುಖ್ಯ ಶಿಕ್ಷಕ ಬಾಬು ಪೂಜಾರಿ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಬಾಳ್ತಿಲ ಮತ್ತು ಮಾಣಿ ಕ್ಲಸ್ಟರಿನ ಸಿ.ಆರ್.ಪಿ ಸತೀಶ್ ರಾವ್ ವಂದಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಮಕ್ಕಳು ಪೋಷಕರು ಎಸ್. ಡಿ. ಎಂ. ಸಿ ಸದಸ್ಯರು, ಆಂಗ್ಲ ಮಾಧ್ಯಮ ವಿದ್ಯಾವರ್ಧಕ ಸಂಘದ ಸದಸ್ಯರು ಹಾಜರಿದ್ದರು. ಶಾಲಾ ಶಿಕ್ಷಕ ವೃಂದ ಸಹಕರಿಸಿದರು.


























