ವಿಟ್ಲ : ಪುತ್ತೂರು ರಸ್ತೆಯ ಸ್ಮಾರ್ಟ್ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್ ಗೆ ಸ್ಥಳಾಂತರಗೊಂಡು ಉದ್ಘಾಟನೆಗೊಂಡ ‘ಸಪ್ತ ಜ್ಯುವೆಲ್ಸ್’ ಗೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ರವರು ಭೇಟಿ ನೀಡಿ ಶುಭ ಕೋರಿದರು.

ಈ ವೇಳೆ ಅವರನ್ನು ಸ್ಮರಣಿಕೆ ನೀಡಿ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.
ಸಪ್ತ ವೆಂಚರ್ಸ್ ಪಾಲುದಾರರಾದ ಅಜಕ್ಕಳ ಶ್ಯಾಮ ಭಟ್, ಸುದರ್ಶನ್ ಕುಮಾರ್ ಇರ್ಕ್ಲಾಜೆ, ಶಿವಪ್ರಕಾಶ್ ಪಂಜಿಬಲ್ಲೆ, ದೇವಿಪ್ರಸಾದ್ ಚಂಗಲ್ಪಾಡಿ, ನಿಶಾಪ್ರಶಾಂತ್ ಸರಳಾಯ, ಕೃಷ್ಣ ಪ್ರಸಾದ್ ಕಡವ, ಗೋವಿಂದರಾಜ ಕಲ್ಲಮಜಲು, ಸುಕುಮಾರ ಕಲ್ಲಮಜಲು ಮೊದಲಾದವರು ಉಪಸ್ಥಿತರಿದ್ದರು.