ಪುತ್ತೂರು : ಮುಂಡೂರು ಸಾರ್ವಜನಿಕ ಶ್ರೀ ಶನೀಶ್ವರ ಪೂಜಾ ಸಮಿತಿಯ ಆಶ್ರಮದಲ್ಲಿ ಲೋಕ ಕಲ್ಯಾಣಾರ್ಥವಾಗಿ ‘9ನೇ ವರ್ಷದ ಸಾರ್ವಜನಿಕ ಶ್ರೀ ಶನಿಪೂಜೆ’ ಜೂ.10 ರಂದು ಮುಂಡೂರು ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.
ಮುಂಡೂರು ಸಾರ್ವಜನಿಕ ಶ್ರೀ ಶನೀಶ್ವರ ಪೂಜಾ ಸಮಿತಿಯ ಗೌರವಾಧ್ಯಕ್ಷರಾಗಿ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷರಾಗಿ ಮನೋಹರ್ ಆಳ್ವ ಪಟ್ಟೆ, ಕಾರ್ಯದರ್ಶಿಯಾಗಿ ಸಚಿನ್ ಶೆಟ್ಟಿ ಪಟ್ಟೆ ಆಯ್ಕೆಯಾದರು.
ಮುಂಡೂರು ಸಾರ್ವಜನಿಕ ಶ್ರೀ ಶನೀಶ್ವರ ಪೂಜಾ ಸಮಿತಿಯ ಅಧ್ಯಕ್ಷರಾದ ಮನೋಹರ್ ಆಳ್ವ ಪಟ್ಟೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಮುಂಡೂರು ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದ ಅರ್ಚಕರಾದ ನಾಗೇಶ ಕುದ್ರೆತ್ತಾಯ ಧಾರ್ಮಿಕ ಪ್ರವಚನ ನೀಡಲಿದ್ದಾರೆ.
ಮುಂಡೂರು ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರವಿ ಶೆಟ್ಟಿ ಮೂಡಂಬೈಲು, ಮುಂಡೂರು ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾದ ಸದಾಶಿವ ಗೌಡ, ಪ್ರಗತಿಪರ ಕೃಷಿಕ, ದಾನಿಗಳಾದ ಹೆಗ್ಗಪ್ಪ ರೈ ಪೊನೋನಿ, ಮುಂಡೂರು ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಕಾರ್ಯದರ್ಶಿ ಬಾಲಕೃಷ್ಣ ಕಣ್ಣಾರಾಯ, ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಗಳ ಸಂಚಾಲಕರಾದ ಭಾಸ್ಕರ್ ಆಚಾರ್ ಹಿಂದಾರು, ಪುತ್ತೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಅರುಣ್ ಕುಮಾರ್ ಪುತ್ತಿಲ, ಮುಂಡೂರು ಕುಕ್ಕಿನಡ್ಕ ಶ್ರೀ ಸುಬ್ರಾಯ ಭಜನಾ ಮಂಡಳಿಯ ಅಧ್ಯಕ್ಷರಾದ ಲಲಿತಾ ಪಜಿಮಣ್ಣು ರವರು ಗೌರವ ಉಪಸ್ಥಿತಿ ವಹಿಸಲಿದ್ದಾರೆ.
ಜೂ.10 ರಂದು ರಾತ್ರಿ 8 ರಿಂದ ಸುಶಾಂತ್ ಆಚಾರ್ಯ ಮುಂಡೂರು ನೇತೃತ್ವದ ಗಾಯತ್ರಿ ಮ್ಯೂಸಿಕಲ್ ದರ್ಬೆ ಪುತ್ತೂರು ವತಿಯಿಂದ ಭಕ್ತಿ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ.