ಪುತ್ತೂರು : ವಿದ್ಯಾರ್ಥಿನಿಯೋರ್ವಳಿಗೆ ಯುವಕನೋರ್ವ ಕಿರುಕುಳ ನೀಡಿದ ಘಟನೆ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಅಪ್ರಾಪ್ತ ಯುವಕನೋರ್ವ, ಅಪ್ರಾಪ್ತ ವಿದ್ಯಾರ್ಥಿನಿಯ ಹೆಗಲ ಮೇಲೆ ಕೈ ಹಾಕಿದ್ದು ಈ ವಿಚಾರವಾಗಿ ಬಸ್ ನಿಲ್ದಾಣದಲ್ಲಿ ಕೆಲಕಾಲ ಗೊಂದಲ ಸೃಷ್ಟಿಯಾಗಿದೆನ್ನಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಯುವಕನನ್ನು ಠಾಣೆಗೆ ಕರೆದೊಯ್ಯಿದಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಠಾಣೆಗೆ ಯಾವುದೇ ದೂರು ನೀಡಲಾಗಿಲ್ಲ ಎಂದು ಮಾಹಿತಿ ಲಭ್ಯವಾಗಿದೆ.