ಪುತ್ತೂರು : ಶ್ರೀ ಕ್ಷೇತ್ರ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಮೇ.10 ರಂದು ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ.
ವಾಸ್ತುಶಿಲ್ಪಿ ಪ್ರಸಾದ ಮುನಿಯಂಗಳ ಮತ್ತು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ದೇವಸ್ಥಾನದ ನೂತನ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ.
ಬೆಳಿಗ್ಗೆ 9 ಗಂಟೆಯಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ.
ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು, ಮಂಗಳೂರು ಕುಳಾಯಿ ಶ್ರೀ ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ತೀರ್ಥ ಶ್ರೀಪಾದಂಗಳವರು, ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ರವರು ಆಶೀರ್ವಚನ ನೀಡಲಿದ್ದಾರೆ.
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕೇಂದ್ರ ಕೃಷಿ ಮತ್ತು ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ನಳಿನ್ ಕುಮಾರ್ ಕಟೀಲ್, ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ರೈ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್., ಬೆಳಂದೂರು ಗ್ರಾಮ ಪಂಚಾಯತ್ ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ, ಬೆಳಂದೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ತೇಜಾಕ್ಷಿ ಕೊಡಂಗೆ, ಶ್ರೀ ಕ್ಷೇತ್ರ ಬರೆಪ್ಪಾಡಿ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಗೌರವ ಸಲಹೆಗಾರರಾದ ಪುರಂಧರ ಭಟ್ ಬರೆಪ್ಪಾಡಿ, ಕ್ಷೇತ್ರ ಬರೆಪ್ಪಾಡಿ ಪಂಚಲಿಂಗೇಶ್ವರ ದೇವಸ್ಥಾನದ ಪವಿತ್ರಪಾಣಿ ರಾಘವೇಂದ್ರ ಭಟ್, ಸವಣೂರು ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕರಾದ ಕೆ. ಸೀತಾರಾಮ ರೈ ಸವಣೂರು, ಹಿಂದೂ ಧಾರ್ಮಿಕ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ಉದ್ಯಮಿ ಡಿ. ಕಿರಣ್ ಚಂದ್ರ, ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ಆಡಳಿತ ಸಮಿತಿ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ ರವರು ಆಗಮಿಸಲಿದ್ದಾರೆ..
