ಕಡಬ : ತಾಲೂಕು ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ರಿಡ್ಜ್ ಕಾರು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದು ಕಾರು ಸೇತುವೆ ಕೆಳಗೆ ನೀರಿಗೆ ಬಿದ್ದು ಓರ್ವ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ.

ಕಾರಿನಲ್ಲಿದ್ದ ತಮಿಳುನಾಡಿನ ಹೊಸೂರು ಕೃಷ್ಣಗಿರಿ ಮೂಲದ ಹರಿಪ್ರಸಾದ್(44) ಮೃತಪಟ್ಟಿದ್ದು, ಗಾಯಗೊಂಡ ಚಾಲಕ ಗೋಪಿ (45)ಎಂಬುವರಿಗೆ ಕಾಲು ಮುರಿದಿದ್ದು, ಆಸ್ಪತ್ರೆ ದಾಖಲಿಸಲಾಗಿದೆ.
ಸ್ಥಳೀಯ ಪರಶುರಾಮ ಕ್ರೇನ್ ತಂಡ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಕಾರು ಮೇಲೆತ್ತುವ ಕಾರ್ಯಾಚರಣೆಯಲ್ಲಿ ನಡೆಸಿದ್ದಾರೆ.
ಸ್ಥಳದಲ್ಲಿ ನೆಲ್ಯಾಡಿ ಹೊರಠಾಣಾ ಸಿಬ್ಬಂದಿ, ಉಪ್ಪಿನಂಗಡಿ ಠಾಣಾಧಿಕಾರಿ ಪರಿಶೀಲನೆ ನಡೆಸುತ್ತಿದ್ದಾರೆ.


























