ವಿಟ್ಲ : ಶ್ರೀ ಭಗವತೀ ಸಹಕಾರ ಬ್ಯಾಂಕ್ ನಿ. ವಿಟ್ಲ ಶಾಖೆಯು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಕಟ್ಟಡದಿಂದ ಸ್ಥಳಾಂತರಗೊಂಡು ವಿಟ್ಲ ಖಾಸಗಿ ಬಸ್ ನಿಲ್ದಾಣದ ಮುಂಭಾಗದ ಹನುಮಾನ್ ಕಾಂಪ್ಲೆಕ್ಸ್ ನಲ್ಲಿ ಜೂ.12 ರಂದು ಶುಭಾರಂಭಗೊಳ್ಳಲಿದೆ.
ಕಾರ್ಯಕ್ರಮವನ್ನು ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ವಿಟ್ಲ ಅರಮನೆ ಬಂಗಾರು ಅರಸರು ಉದ್ಘಾಟನೆಗೊಳಿಸಲಿದ್ದಾರೆ.
ವಿಟ್ಲ ಹನುಮಾನ್ ಕಾಂಪ್ಲೆಕ್ಸ್ ನ ಮಾಲಕರಾದ ಕೆ. ವೆಂಕಟೇಶ್ ಭಟ್ ರವರು ದೀಪ ಪ್ರಜ್ವಲನೆ ಮಾಡಲಿದ್ದಾರೆ.
ಭದ್ರತಾ ಕೊಠಡಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕರಾದ ಎಚ್.ಎಸ್ ರಮೇಶ್ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಭಗವತಿ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ನಾರಾಯಣ ಕೆ. ರವರು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕೊಡಿಯಾಲ್ ಬೈಲ್, ಕುದ್ರೋಳಿ ಶ್ರೀ ಭಗವತೀ ಕ್ಷೇತ್ರ ಅಧ್ಯಕ್ಷರಾದ ಗಣೇಶ್ ಕುಂಟಲ್ಪಾಡಿ, ಉಳ್ಳಾಲ ಶ್ರೀ ಚೀರುಂಭ ಭಗವತೀ ಕ್ಷೇತ್ರದ ಅಧ್ಯಕ್ಷರಾದ ಚಂದ್ರಹಾಸ ಉಳ್ಳಾಲ್, ಎರುಂಬು, ಬೋಳ್ನಾಡು ಶ್ರೀ ಭಗವತೀ ಕ್ಷೇತ್ರದ ಅಧ್ಯಕ್ಷರಾದ ಕೃಷ್ಣ ಎನ್. ಉಚ್ಚಿಲ ರವರು ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

























