ಪುತ್ತೂರು : ರಾಜ್ಯದ ಮಹಿಳೆಯರಿಗೆ ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಕೆಎಸ್ಸಾರ್ಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕಾಗಿ ಆರಂಭಿಸಿರುವ ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಇಂದು ಮಧ್ಯಾಹ್ನ ಚಾಲನೆ ದೊರಕಿದ್ದು, ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ.

ಪುತ್ತೂರು ತಾಲೂಕು ಸೇಡಿಯಾಪು ಜಂಕ್ಷನ್ ನಲ್ಲಿ ಕೋಡಿಂಬಾಡಿ ಗ್ರಾಮ ಪಂಚಾಯತ್ ಸದಸ್ಯ ಜಯಪ್ರಕಾಶ್ ಬದಿನಾರು ರವರ ನೇತೃತ್ವದಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮ ನಡೆಯಿತು.

ಪಟಾಕಿ ಸಿಡಿಸಿ, ಸಿಹಿ ತಿಂಡಿ ವಿತರಿಸಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಆರಂಭಿಸಿರುವ ಶಕ್ತಿ ಯೋಜನೆಯನ್ನು ಅದ್ದೂರಿಯಾಗಿ ಸ್ವಾಗತಿಸಿದರು.

























