ಬೆಂಗಳೂರು : ಇದೀಗ ರಾಜ್ಯದ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆಗೊಂಡಿದ್ದು, ಒಂದೇ ದಿನ 21149 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು 1164398 ಗುಣಮುಖರಾಗಿದ್ದಾರೆ.
ಇಂದು ದಕ್ಷಿಣ ಕನ್ನಡದಲ್ಲಿ 996, ಉಡುಪಿಯಲ್ಲಿ 413, ಉತ್ತರ ಕನ್ನಡ 538 ಸೇರಿದಂತೆ ರಾಜ್ಯದಲ್ಲಿ ಒಂದೇ ದಿನ 37733 ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. . ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 996 ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಒಟ್ಟು 47038 ಪ್ರಕರಣಗಳಾಗಿವೆ. ಜಿಲ್ಲೆಯಲ್ಲಿ ಇಂದು 413 ಸೋಂಕಿತರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 7595 ಸಕ್ರೀಯ ಪ್ರಕರಣಗಳಿವೆ.