ಬಂಟ್ವಾಳ : ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯ ಜೋಗಿಬೆಟ್ಟು ಎಂಬಲ್ಲಿ ನಡೆದಿದೆ.ಬುಡೋಳಿ ನಿವಾಸಿ ಮಹಮ್ಮದ್ ಶರೀಫ್(35) ಮೃತಪಟ್ಟವರು.
ಇವರು ಬುಡೋಳಿಯಿಂದ ಗಡಿಯಾರ ಕಡೆಗೆ ತನ್ನ ಡಿಯೋ ವಾಹನದಲ್ಲಿ ತೆರಳುತ್ತಿದ್ದ ವೇಳೆ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಸಿಮೆಂಟ್ ಸಾಗಾಟ ಮಾಡುತ್ತಿದ್ದ ಲಾರಿ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.