ಪುತ್ತೂರು : ಸಂತ ಫಿಲೋಮಿನಾ ಕಾಲೇಜು ಹಿರಿಯ ವಿದ್ಯಾರ್ಥಿಗಳ ಶ್ರೀ ಗಣೇಶೋತ್ಸವ ಸೇವಾ ಟ್ರಸ್ಟ್ ಹಾಗೂ ಸಂತ ಫಿಲೋಮಿನಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ಶ್ರೀ ಗಣೇಶೋತ್ಸವ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ದರ್ಬೆ ವಿನಾಯಕ ನಗರದಲ್ಲಿ ಜರಗಲಿರುವ 2 ದಿನಗಳ 41ನೇ ವರ್ಷದ ಶ್ರೀ ಗಣೇಶೋತ್ಸವದ ಪೂರ್ವಭಾವಿ ಸಭೆ ಜೂ.18 ರಂದು ಮಧ್ಯಾಹ್ನ 3.30ಕ್ಕೆ ಮುಕ್ರಂಪಾಡಿ ಸುಭದ್ರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿ ಸಲಹೆ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


























