ಪುತ್ತೂರು : ಬಿಜೆಪಿ ಸರಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ರದ್ದು ಮಾಡಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ವಿಶ್ವಹಿಂದು ಪರಿಷದ್ ಬಜರಂಗದಳದಿಂದ ಜೂ.19 ರಂದು ಪ್ರತಿಭಟನೆ ನಡೆಯಲಿದೆ.
ಪುತ್ತೂರು ಕಿಲ್ಲೆ ಮೈದಾನದ ಅಮರ್ ಜವಾನ್ ಸ್ಮಾರಕ ಜ್ಯೋತಿಯ ಬಳಿ ಪ್ರತಿಭಟನೆ ನಡೆಯಲಿದೆ ಎಂದು ಸಂಘಟನೆ ಪ್ರಕಟಣೆಯಲ್ಲಿ ತಿಳಿಸಿದೆ.



























