ಬೆಂಗಳೂರು: ರಾಜ್ಯದಾದ್ಯಂತ ಇಂದು 20, 901 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು ಈವರೆಗೆ 11,85,299 ಮಂದಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಇಲಾಖೆ ತನ್ನ ಹೆಲ್ತ್ ಬುಲೆಟಿನ್ನಲ್ಲಿ ಹೇಳಿದೆ.
ರಾಜ್ಯದಲ್ಲಿ ಇಂದು 8,164 ಆ್ಯಂಟಿಜೆನ್ ಟೆಸ್ಟ್ ಹಾಗೂ 1,40,926 ಆರ್ಟಿಪಿಸಿಆರ್ ಟೆಸ್ಟ್ಗಳೂ ಸೇರಿದಂತೆ ಒಟ್ಟು 1,49,090 ಕೊರೊನಾ ಪರೀಕ್ಷೆಗಳನ್ನು ಮಾಡಲಾಗಿದೆ. ಈ ಪೈಕಿ ಇಂದು 44,438 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ರಾಜ್ಯದಲ್ಲಿ 4,44,734 ಆ್ಯಕ್ಟಿವ್ ಕೇಸ್ಗಳಿವೆ.