ಬೆಂಗಳೂರು: ಕಾಂಗ್ರೆಸ್ನ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ಅಡಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.
ಗೃಹಜ್ಯೋತಿಗೆ ಅರ್ಜಿ ಸಲ್ಲಿಸುವ ಕ್ರಮ:
ಗೃಹಜ್ಯೋತಿ ಯೋಜನೆ ಅಡಿ ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿಗೆ ಅವಕಾಶ ಕಲ್ಪಿಸಲಾಗಿದ್ದು, https://sevasindhugss.karnataka.gov.in ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಮೊಬೈಲ್, ಕಂಪ್ಯೂಟರ್, ಲ್ಯಾಪ್ಟಾಪ್ನಲ್ಲೂ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1912 ಸಂಪರ್ಕಿಸಬಹುದಾಗಿದೆ.
ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ನಾಡ ಕಚೇರಿ, ಗ್ರಾ.ಪಂ. ಕಚೇರಿ, ವಿದ್ಯುತ್ ಕಚೇರಿಗಳಲ್ಲಿ ನೋಂದಾಯಿಸಬಹುದು. ಆಧಾರ್ ಕಾರ್ಡ್, ಆರ್ಆರ್ ನಂಬರ್, ಮೊಬೈಲ್ ಸಂಖ್ಯೆ, ಮನೆ ಬಾಡಿಗೆ ಕರಾರು ಪತ್ರ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.


























