ಬೆಳ್ತಂಗಡಿ : ಧರ್ಮಸ್ಥಳ ಸೇವಾ ಸಹಕಾರಿ ಬ್ಯಾಂಕ್ ಮುಖ್ಯ ಕಾರ್ಯನಿರ್ಹಣಾಧಿಕಾರಿ ರವೀಂದ್ರನ್ ಡಿ.(57) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಬಂಧುಗಳನ್ನು ಅಗಲಿದ್ದಾರೆ.
ಸಂಘದ ಅಟಲ್ ಜಿ ಸಭಾಭವನದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ರವೀಂದ್ರನ್ ಅವರ ಮೃತದೇಹ ಮಧ್ಯಾಹ್ನ ಪತ್ತೆಯಾಗಿದೆ. ಆದರೆ ಬೆಳಗ್ಗೆ 7.30 ರ ವೇಳೆ ಕಚೇರಿಗೆ ಬಂದು ತಮ್ಮ ಹಾಜರಿಯನ್ನು ನಮೂದಿಸಿದ್ದರು ಎನ್ನಲಾಗಿದೆ.ಆತ್ಮ ಹತ್ಯೆಯ ಬಗ್ಗೆ ನಿಖರವಾದ ಕಾರಣ ಇದುವರೆಗೆ ತಿಳಿದುಬಂದಿಲ್ಲ. ವೈಯಕ್ತಿಕ ವಿಚಾರಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ.ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು,ಸ್ಥಳವನ್ನು ಪರಿಶೀಲಿಸಿ ಕಾರ್ಯಾಚರಣೆ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ.