ಪುತ್ತೂರು : ಯಾದವ ಸಭಾ ತಾಲೂಕು ಸಮಿತಿ ಯುವ ವೇದಿಕೆ ಹಾಗೂ ಮಹಿಳಾ ವೇದಿಕೆ ಪುತ್ತೂರು ಇದರ ವಾರ್ಷಿಕ ಮಹಾ ಸಭೆ ಪ್ರತಿಭಾ ಪುರಸ್ಕಾರ ಹಾಗೂ ಪುಸ್ತಕ ವಿತರಣೆ ಜುಲೈ 2 ರಂದು ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಯಾದವ ಸಭಾ ಕರ್ನಾಟಕ ಕೇಂದ್ರ ಸಮಿತಿಯ ಅಧ್ಯಕ್ಷರಾದ ಎ.ಕೆ. ಮಣಿಯಾಣಿ ಬೆಳ್ಳಾರೆ ರವರು ನೆರವೇರಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ತಾಲೂಕು ಯಾದವ ಸಭಾ ಸಮಿತಿಯ ಅಧ್ಯಕ್ಷರಾದ ಶ್ರೀಪ್ರಸಾದ್ ಪಾಣಾಜೆ ರವರು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಯಾದವ ಸಭಾ ಕರ್ನಾಟಕ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸದಾನಂದ ಕಾವೂರು, ಯಾದವ ಸಭಾ ಕರ್ನಾಟಕ ಕೇಂದ್ರ ಸಮಿತಿಯ ಸಲಹಾ ಮಂಡಳಿಯ ಅಧ್ಯಕ್ಷರಾದ ಸುಧಾಮ ಆಲೆಟ್ಟಿ, ಯಾದವ ಸಭಾ ಕರ್ನಾಟಕ ಕೇಂದ್ರ ಸಮಿತಿಯ ಕೋಶಾಧಿಕಾರಿ ರಾಮಚಂದ್ರ ಯದುಗಿರಿ, ಸಿಬ್ಬಂದಿ ಸೇವಾ ರಾಜ್ಯ ಪ್ರಶಸ್ತಿ ಪುರಸ್ಕೃತೆ ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿ ರಾಮ್ ಕಣೆಮರಡ್ಕ ಆಗಮಿಸಲಿದ್ದಾರೆ.
ಮಂಗಳೂರು ತಾಲೂಕು ಯಾದವ ಸಭಾ ಸಮಿತಿಯ ಅಧ್ಯಕ್ಷರಾದ ಕೃಷ್ಣ ಬಿ. ಪಡೀಲ್, ಬಂಟ್ವಾಳ ತಾಲೂಕು ಯಾದವ ಸಭಾ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್, ಸುಳ್ಯ ತಾಲೂಕು ಯಾದವ ಸಭಾ ಸಮಿತಿಯ ಅಧ್ಯಕ್ಷರಾದ ಕರುಣಾಕರ ಹಾಸ್ಪರೆ, ಬೆಟ್ಟಂಪಾಡಿ-ನಿಡ್ಪಳ್ಳಿ ಯಾದವ ಸಭಾ ಪ್ರಾದೇಶಿಕ ಸಮಿತಿಯ ಅಧ್ಯಕ್ಷರಾದ ಕೊಗ್ಗು ಮಣಿಯಾಣಿ, ಕುರಿಂಜ ಯಾದವ ಸಭಾ ಪ್ರಾದೇಶಿಕ ಸಮಿತಿಯ ಅಧ್ಯಕ್ಷರಾದ ಲೋಕೇಶ ಕುಂಟಾಪು, ಪುತ್ತೂರು ಯಾದವ ಸಭಾ ಪ್ರಾದೇಶಿಕ ಸಮಿತಿಯ ಅಧ್ಯಕ್ಷರಾದ ದಾಮೋದರ ಮಣಿಯಾಣಿ ಸಂಪ್ಯ, ಪಾಣಾಜೆ ಯಾದವ ಸಭಾ ಪ್ರಾದೇಶಿಕ ಸಮಿತಿಯ ಅಧ್ಯಕ್ಷರಾದ ಧನಂಜಯ ಯಾದವ್ ಗೌರವ ಉಪಸ್ಥಿತಿ ವಹಿಸಲಿದ್ದಾರೆ.


























