ಪುತ್ತೂರು : ಲಾರಿಯಲ್ಲಿ ಕೊಂಡೊಯ್ಯುತ್ತಿದ್ದ ಕಂಟೈನರ್ ನಿಯಂತ್ರಣ ತಪ್ಪಿ ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದ ಘಟನೆ ಬೈಪಾಸ್ ರಸ್ತೆ ಬೊಳ್ವಾರಿನಲ್ಲಿ ನಡೆದಿದೆ.

ಬೈಪಾಸ್ ರಸ್ತೆ ಬೊಳ್ವಾರಿನಲ್ಲಿ ವ್ಯಕ್ತಿಯೋರ್ವರು ಕಾರು ನಿಲ್ಲಿಸಿ ಕಾರಿನಲ್ಲಿ ಕುಳಿತಿದ್ದ ವೇಳೆ ಲಾರಿಯಲ್ಲಿ ಕೊಂಡೊಯ್ಯುತ್ತಿದ್ದ ಕಂಟೈನರ್ ನಿಯಂತ್ರಣ ತಪ್ಪಿ ಕಾರಿನ ಮೇಲೆ ಬಿದ್ದಿದೆನ್ನಲಾಗಿದೆ.
ಘಟನೆಯಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.
























