ಉಪ್ಪಿನಂಗಡಿ : ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ ಗೌಡ ಎಂಬವರ ಪತ್ನಿ, ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ (28) ಜೂ.20 ರಂದು ರಾತ್ರಿ ಹೆರಿಗೆ ಸಂದರ್ಭದಲ್ಲಿ ತೀವ್ರ ರಕ್ತಸ್ರಾವ ಉಂಟಾಗಿ ಮೃತಪಟ್ಟಿದ್ದಾರೆ.

ಭವ್ಯ ರವರದ್ದು 3ನೇ ಹೆರಿಗೆಯಾಗಿದ್ದು, ಸೋಮವಾರ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಂಗಳವಾರ ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆಯಾಗುತ್ತಲೇ ತೀವ್ರ ರಕ್ತಸ್ರಾವ ಉಂಟಾಗಿದ್ದು, ಇದನ್ನು ತಡೆಗಟ್ಟುವ ಚಿಕಿತ್ಸೆಯಿಂದ ಪ್ರಯೋಜನವಾಗದ ಕಾರಣ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಿದು ಚಿಕಿತ್ಸೆ ನೀಡಲಾಗಿದ್ದು, ಅಲ್ಲಿಯೂ ಚಿಕಿತ್ಸೆ ಫಲಕಾರಿ ಆಗದೆ ಜೂ.21 ರಂದು ಬೆಳಿಗ್ಗೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಮೃತರು ಪತಿ ಬಾಲಕೃಷ್ಣ ಗೌಡ, ಇಬ್ಬರು ಪುಟ್ಟ ಗಂಡು ಮಕ್ಕಳು ಹಾಗೂ ಹಸುಗೂಸು ಗಂಡು ಮಗುವನ್ನು ಅಗಲಿದ್ದಾರೆ.
























