ಮಂಗಳೂರು : ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆಯುವುದು ಕೂದಲೆಳೆ ಅಂತರದಲ್ಲಿ ತಪ್ಪಿದ್ದು, ಮಹಿಳೆ ಜೀವಪಾಯದಿಂದ ಪಾರಾದ ಘಟನೆ ತೌಡುಗೋಳಿ ಕ್ರಾಸ್ ಬಳಿ ನಡೆದಿದೆ. ಜೂ.20 ರಂದು ಮಧ್ಯಾಹ್ನ ಮುಡಿಪುನಿಂದ ತೌಡುಗೋಳಿ ಮಾರ್ಗವಾಗಿ ಮಂಗಳೂರು ಕಡೆಗೆ ಗೋಪಾಲಕೃಷ್ಣ ಬಸ್ಸಿನ ಚಾಲಕ ತ್ಯಾಗರಾಜ್ ದುಡುಕುತನ ಹಾಗೂ ನಿರ್ಲಕ್ಷತನದಿಂದ, ಕರ್ಕಶ ಹಾರ್ನ್ ಹಾಕುತ್ತಾ ಬಸ್ಸನ್ನು ಚಲಾಯಿಸಿಕೊಂಡು ಬರುತ್ತಿದ್ದರು ಎಂದು ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ವಿವರ:
ಪಾದಚಾರಿ ಮಹಿಳೆ ಬಸ್ ಅಪಘಾತದಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ತೌಡುಗೋಳಿ ಸಮೀಪದ ನರಿಂಗಾನದಲ್ಲಿ ಮಂಗಳವಾರ ನಡೆದಿದ್ದು, ವೀಡಿಯೋ ವೈರಲ್ ಆಗಿದೆ.
ಮಹಿಳೆಯನ್ನು ರಕ್ಷಿಸಿದ ಬಸ್ ಚಾಲಕ , ಕೈರಂಗಳ ನಿವಾಸಿ ತ್ಯಾಗರಾಜ್ ಮಂಗಳೂರು ಮುಡಿಪು ಚಲಿಸುವ ಗೋಪಾಲಕೃಷ್ಣ ಖಾಸಗಿ ಬಸ್ ಚಾಲಕನ ಚಾಣಾಕ್ಷತನದಿಂದ ಮಹಿಳೆ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ.
ಮಹಿಳೆಯೋರ್ವರು ರಸ್ತೆಯಲ್ಲಿ ಬರುವ ವಾಹನಗಳನ್ನು ಗಮನಿಸದೆ ರಸ್ತೆ ದಾಟಿದ್ದಾರೆ. ಈ ವೇಳೆ ಎದುರಿನಿಂದ ಬಸ್ ಬಂದಿದೆ. ಮಹಿಳೆ ರಸ್ತೆ ದಾಟುವುದನ್ನು ಗಮನಿಸಿದ ಬಸ್ ಡ್ರೈವರ್ ಬಸ್ ನ್ನು ಎಡಕ್ಕೆ ಸರಿಸಿ ಕೂದಲೆಳೆ ಅಂತರದಲ್ಲಿ ಮಹಿಳೆಯನ್ನು ರಕ್ಷಿಸಿದ್ದಾರೆ.
ಚಾಲಕನ ಸಮಯಪ್ರಜ್ಞೆಯಿಂದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳಿಕ ಎಲ್ಲರೂ ಮಹಿಳೆಯ ಆರೋಗ್ಯ ವಿಚಾರಿಸಿ ಕಳುಹಿಸಿ ಕೊಟ್ಟಿದ್ದಾರೆ.
ಘಟನೆಯ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ. ಆದರೇ ಬಸ್ ಚಾಲಕ ತ್ಯಾಗರಾಜ್ ದುಡುಕುತನ ಹಾಗೂ ನಿರ್ಲಕ್ಷತನದಿಂದ, ಕರ್ಕಶ ಹಾರ್ನ್ ಹಾಕುತ್ತಾ ಬಸ್ಸನ್ನು ಚಲಾಯಿಸಿಕೊಂಡು ಬರುತ್ತಿದ್ದರು ಎಂದು ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

























