ಉಪ್ಪಿನಂಗಡಿ : ತೀವ್ರ ರಕ್ತಸ್ರಾವದಿಂದಾಗಿ ಬಾಣಂತಿ ಆಶಾ ಕಾರ್ಯಕರ್ತೆ ಮೃತಪಟ್ಟ ಬೆನ್ನಲ್ಲೇ ಕೂಸು ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ ಗೌಡ ಎಂಬವರ ಪತ್ನಿ, ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ (28) ಜೂ.20 ರಂದು ರಾತ್ರಿ ಹೆರಿಗೆ ಸಂದರ್ಭ ರಕ್ತಸ್ರಾವದಿಂದ ಸಾವನ್ನಪ್ಪಿದ ಬೆನ್ನಿಗೆ ಅವರ ಹಸುಕೂಸು ಗುರುವಾರ ಮುಂಜಾನೆ ಮೃತಪಟ್ಟಿದೆ ಎಂದು ತಿಳಿದುಬಂದಿದೆ.
ಭವ್ಯ ರವರು ತನ್ನ 3ನೇ ಹೆರಿಗೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಮಂಗಳವಾರ ರಾತ್ರಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು, ಹೆರಿಗೆಯಾಗುತ್ತಲೇ ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ್ದರು. ಜನಿಸಿದ ಮಗುವನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮುಂಜಾನೆ ಮಗುವೂ ಮೃತಪಟ್ಟಿದೆ ಎಂದು ತಿಳಿದುಬಂದಿದೆ.

























