ಕಡಬ : ಯುವತಿಯೋರ್ವಳು ನಾಪತ್ತೆಯಾದ ಘಟನೆ ಕಡಬದ ಕಳಾರ ಎಂಬಲ್ಲಿ ನಡೆದಿದೆ.
ನಾಪತ್ತೆಯಾದ ಯುವತಿಯನ್ನು ಹಾಸನ ಜಿಲ್ಲೆ ಬೇಲೂರು ತಾಲೂಕು ಹಗರೆ ಅಂಗಡಿಹಳ್ಳಿ ನಿವಾಸಿ, ಕಡಬ ತಾಲೂಕಿನ ಕಡಬ ಗ್ರಾಮದ ಕಳಾರ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ರಕ್ಷಿತಾ (18) ಎಂದು ಗುರುತಿಸಲಾಗಿದೆ.
ಈ ಬಗ್ಗೆ ಆಕೆಯ ಸಹೋದರ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ 6 ವರ್ಷಗಳಿಂದ ಕಡಬದ ಕಳಾರದ ಇಸ್ಮಾಯಿಲ್ ಎಂಬವರ ಬಾಡಿಗೆ ಮನೆಯಲ್ಲಿ ತಂದೆ, ತಾಯಿ ಸಹೋದರ, ಸಹೋದರಿಯೊಂದಿಗೆ ವಾಸವಾಗಿದ್ದ ಈಕೆ, 10ನೇ ತರಗತಿ ವಿದ್ಯಾಭ್ಯಾಸ ಮಾಡಿ ಬಳಿಕ 3 ವರ್ಷದಿಂದ ಮನೆಯಲ್ಲಿಯೇ ಮನೆ ಕೆಲಸ ಮಾಡಿಕೊಂಡಿದ್ದಳು.
ಜೂ.20 ರಂದು ಬೆಳಗ್ಗೆ ಮನೆಯಿಂದ ಹೋದವಳು ಇದುವರೆಗೆ ಮನೆಗೆ ಬಾರದೇ, ಬೇಲೂರು ತಾಲೂಕಿನ ಹಗರ ಎಂಬಲ್ಲಿಗೂ ಹೋಗದೆ ನಾಪತ್ತೆಯಾಗಿದ್ದಾಳೆ.
ರಕ್ಷಿತಾ ಸಂಬಂಧಿಕ ರವಿ ಎಂಬಾತನನ್ನು ಪ್ರೀತಿಸುತ್ತಿದ್ದು, ಸದ್ಯ ಆತನ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದ್ದು, ಯಾವುದೇ ಮಾಹಿತಿ ಪತ್ತೆ ಸಾಧ್ಯವಾಗಿಲ್ಲ ಎಂದು ಸಹೋದರ ಸುನಿಲ್ ದೂರಿನಲ್ಲಿ ತಿಳಿಸಿದ್ದಾರೆ.


























