ಕಡಬ : ಕೋಡಿಂಬಾಳ ಸಮೀಪದ ನೆಕ್ಕಿಲಾಡಿ ಗ್ರಾಮದ ಕೋರಿಯರ್ ಎಂಬಲ್ಲಿ ಕುಮಾರಧಾರ ನದಿಗೆ ವ್ಯಕ್ತಿಯೋರ್ವರು ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ರಬ್ಬರ್ ಕಟ್ಟಿಂಗ್ ಕೆಲಸಕ್ಕೆಂದು ಸಕಲೇಶಪುರದಿಂದ ಕೋಡಿಂಬಾಳಕ್ಕೆ ಬಂದಿದ್ದ ಸಕಲೇಶಪುರ ಬಾಲಗದ್ದೆ ನಿವಾಸಿ ಧರ್ಮಯ್ಯ (40) ಎಂದು ಗುರುತಿಸಲಾಗಿದೆ.
ಧರ್ಮಯ್ಯ ತನ್ನ ಶೂವನ್ನು ನದಿಯ ಬದಿಯಲ್ಲಿಟ್ಟು ನದಿಗೆ ಹಾರಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕಡಬ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರ ಸಹಕಾರದಿಂದ ಶೌರ್ಯ ತಂಡದ ಸದಸ್ಯರು ನದಿಯಲ್ಲಿ ಹುಡುಕಾಟ ನಡೆಸಿದ ವೇಳೆ ಮೃತದೇಹ ಪತ್ತೆಯಾಗಿದೆ.



























