ಪುತ್ತೂರು : ಪಿಕಪ್ ವಾಹನ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕಲ್ಲರ್ಪೆಯಲ್ಲಿ ನಡೆದಿದೆ.

ಘಟನೆ ಬೈಕ್ ಸವಾರ ಮೃತಪಟ್ಟಿದ್ದು, ಮೃತ ಬೈಕ್ ಸವಾರನನ್ನು ಸುಳ್ಯದ ಜಟ್ಟಿಪಳ್ಳ ನಿವಾಸಿ ನಾಗರಾಜ (53) ಎಂದು ಗುರುತಿಸಲಾಗಿದೆ.
ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದ್ದು, ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

























