ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಾರ್ಪೋರೇಟ್ ಕಚೇರಿಯ ಉದ್ಘಾಟನಾ ಸಮಾರಂಭ ಜುಲೈ.1 ರಂದು ಕಲ್ಲಾರೆಯ ನವಾಜ್ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಕಾವೂರಿನ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ ರವರು ನೂತನ ಕಚೇರಿಯನ್ನು ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದ್ದಾರೆ.


























