ಪುತ್ತೂರು : ಆಮ್ ಆದ್ಮಿ ಪಕ್ಷದ ಮುಖಂಡ, ಮುಂಡೂರು ಗ್ರಾ.ಪಂ ಸದಸ್ಯ ಮಹಮ್ಮದ್ ಆಲಿ ನೇರೋಳ್ತಡ್ಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಜು.1 ರಂದು ಸರ್ವೆ ಗ್ರಾಮದ ಕಲ್ಪಣೆ ಮೊಗೇರ ಸಮುದಾಯ ಭವನದಲ್ಲಿ ಸರ್ವೆ ವಲಯ ಕಾಂಗ್ರೆಸ್ ವತಿಯಿಂದ ಶಾಸಕ ಅಶೋಕ್ ರೈ ಮತ್ತು ಕಾರ್ಯಕರ್ತರಿಗೆ ನಡೆದ ಅಭಿನಂದನಾ ಸಮಾರಂಭದಲ್ಲಿ ಅವರು ಕಾಂಗ್ರೆಸ್ ಸೇರ್ಪಡೆಯಾದರು.
ಶಾಸಕ ಅಶೋಕ್ ಕುಮಾರ್ ರೈ ಅವರು ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರ ಮಾಡಿಕೊಂಡರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

























