ಬೆಂಗಳೂರು: ಬಿಬಿಎಂಪಿಯಿಂದ ಬೆಡ್ ಬುಕ್ಕಿಂಗ್ ದಂಧೆ ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಬಂಧಿತರನ್ನು ರೋಹಿತ್ ಹಾಗೂ ನೇತ್ರಾ ಎಂದು ಗುರುತಿಸಲಾಗಿದ್ದು, ಇವರನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.ಬಿಬಿಎಂಪಿ ಅಧಿಕಾರಿಗಳಿಂದ ನಡೆಯುತ್ತಿದ್ದ ಬಹುದೊಡ್ಡ ಬೆಡ್ ಬುಕ್ಕಿಂಗ್ ದಂಧೆಯನ್ನು ಸಂಸದ ತೇಜಸ್ವಿ ಸೂರ್ಯ, ಶಾಸಕ ರವಿಸುಬ್ರಮಣ್ಯ, ಸತೀಶ್ ರೆಡ್ಡಿ ಇತರರು ಬಯಲಿಗೆಳೆದಿದ್ದಾರೆ ಎನ್ನಲಾಗಿದೆ.
ಬಂಧಿತ ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದು, ಈ ದಂಧೆಯಲ್ಲಿ ಇನ್ಯಾರೆಲ್ಲಾ ಶಾಮೀಲಾರಾಗಿದ್ದಾರೆ ಎಂಬುದನ್ನು ಪೊಲೀಸರು ಪತ್ತೆ ಹಚ್ಚಲಿದ್ದಾರೆ.